
ಈ ರೀತಿ ಭಾಷಣ ಮಾಡೋವರಿಗೆ 'ವಿಜ್ಞಾನ ಮತ್ತು ತಂತ್ರಜ್ಞಾನದಿಂದ ಬಡತನ ನೀಗಲಿ' ಎಂದು ಹೇಳಲಷ್ಟೇ ಗೊತ್ತು. ಅದನ್ನು ಹೇಗೆ ಮಾಡೋದು? ನಾವೇನು ಮಾಡಬೇಕು? ಇವರಿಗೇನೂ ಗೊತ್ತಿರಲ್ಲ. ಇನ್ನು ಇಂಥ ಕುಬೇರರಿಂದಲೇ ಅಭಿವೃದ್ಧಿ ಹೊಂದುವ ವಿಜ್ಷಾನ ಮತ್ತು ತಂತ್ರಜ್ಞಾನ ಬಡತನವನ್ನು ನೀಗಿಸುವುದಾದರೂ ಹೇಗೆ? ಮೊನ್ನೆ ಮೊನ್ನೆ ಒಂದು ಸಮೀಕ್ಷಾ ವರದಿ ಬಂದಿತ್ತು..ಅದೂ ವಿಶ್ವಬ್ಯಾಂಕ್ ಜಾಗತಿಕ ಬಡತನ ತಖ್ತೆಯಿಂದ ತಿಳಿದುಬಂದಿದ್ದು. .ಭಾರತದ ಒಟ್ಟು ಜನಸಂಖ್ಯೆಯ 1/3ರಷ್ಟು ಜನ ಬಡವರು! ಬೆಂಗಳೂರಿನ ಒಟ್ಟು ಜನಸಂಖ್ಯೆಯ ಅರ್ಧದಷ್ಟು ಜನ ಕೊಳಗೇರಿಗಳಲ್ಲಿ ವಾಸಿಸುತ್ತಾರೆ. ಇವರ ಮನೆಯಲ್ಲಿ ಬೆಳಕು ನೀಡುವ ವಿದ್ಯುತ್ ಬಲ್ಬ್ ಗಳಿಲ್ಲ..ಕುಡಿಯುವ ನೀರಿನ ವ್ಯವಸ್ಥೆ ಇರುವುದಿಲ್ಲ. ಮಳೆ ಬಂದಾಗಲೆಲ್ಲಾ..ರಸ್ತೆ, ಚರಂಡಿಗಳ ನೀರು ಇವರ ಮನೆಗೆ ಹೋಗುತ್ತದೆ. ಇದು ಇಲ್ಲಿನ ಯಾವ ಮಹಾನ್ ಉದ್ಯಮಿಗಾದ್ರೂ ಅರಿವಿಗೆ ಬರುತ್ತದೆಯೇ? ಅರಿವು ಬಿಡಿ..ಯಾರೋಬ್ಬರ ಭಾಷಣದ ವಸ್ತುವೂ ಇದಾಗಲ್ಲ. ಜಾಗತಿಕ ಮಟ್ಟದಲ್ಲಿ ನಂ. 1ಆದವನು ಯಾವತ್ತೂ ಬಡಜನರ ಅಭಿವೃದ್ಧಿ ಬಗ್ಗೆ ಕನಸು ಕಾಣುವ ಮಾತನಾಡಿದರೆ ..ಅದು ಸತ್ಯವೆಂದು ನಂಬುವುದೇ ಅಪರಾಧವಾದೀತು. ಈ ರೀತಿ ಮೈಕ್ ಎದುರು ನಿಂತು 'ಬಡತನ ತೊಲಗಲಿ, ಬಡಜನರ ಉದ್ಧಾರ ಆಗ್ಲಿ..ಹಾಗೇ ಮಾಡಬೇಕು. ಹೀಗೇ ಮಾಡಬೇಕು' ಎಂದು ಹೇಳುವ ಬದಲು, ಸ್ವತಃ ನಾವೇನಾದ್ರೂ ಮಾಡಿದರೆ ಎಂದು ಯೋಚಿಸಬೇಕು. ತಾಕತ್ತಿದ್ರೆ ಬಡಜನರ ಮನೆಗೆ ಹೋಗಿ ನೋಡಲಿ..ಸತ್ತು ಬದುಕುವ ಬಡವರ ಬದುಕನ್ನು ಕಣ್ಣು ಬಿಟ್ಟು ನೋಡಬೇಕು. ನಮ್ಮ ಸರ್ಕಾರ, ಜನಪ್ರತಿನಿಧಿಗಳ ಬಗ್ಗೆ ಹೇಳಿ ಪ್ರಯೋಜನವಿಲ್ಲ. ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ನಂ.1 ಎನಿಸಿಕೊಂಡ ಉದ್ಯಮಿಗಳು, ವಿಜ್ಞಾನಿಗಳು ಮುಂತಾದವರು ಬಡತನ ಎಂಬ ಶಬ್ಧವನ್ನು ಭಾಷಣದ ವಸ್ತುವಾಗಿಸುವ ಬದಲು, ಬಡಜನರ ಬದುಕಿಗೆ ನೆರವಾಗುವುದು ಹೇಗೇ? ಎಂಬುದನ್ನು ಯೋಚಿಸಬೇಕು.
ಫೋಟೋ: ಎನ್.ಕೆ.ಎಸ್.
2 comments:
’ಹೇಳೊದು ಶಾಸ್ತ್ರ ,ತಿನ್ನೋದು ಗೋಬಿ ಮಂಚೂರಿ’
ಕೆಲವರ ಅಭ್ಯಾಸಗಳೇ ಹೀಗೆ ,ಏನಾದ್ರೂ ಮಾತಾಡ್ಬೇಕು ಅಂತ ಮಾತಾಡ್ತಾರೆ.
ಅದಕ್ಕೇ ಇರೋದು ಗಾದೆ
ಆಚಾರ ಹೇಳೋದಕ್ಕೆ, ಬದನೇಕಾಯಿ ತಿನ್ನೋದಕ್ಕೆ :)
ಮಾತಾಡೋರು ಕೆಲಸ ಮಾಡಲ್ಲ, ಕೆಲಸ ಮಾಡೋರು ಮಾತಾಡೋಲ್ಲ.
ಎರಡೂ ಮಾಡೋರು ಬಹಳ ಕಮ್ಮಿ
Post a Comment